ರಾಯಚೂರು: ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದು ಮತ್ತೊಬ್ಬ ಸವಾರನಿಗೆ ಗಂಭೀರ ಗಾಯವಾಗಿದೆ.
ಮೃತರು ರಾಯಚೂರು ನಗರದ ತಿಮ್ಮಪೂರ ಪೇಟೆ ನಿವಾಸಿಗಳಾದ ದೀಪಕ್ (22)ವರ್ಷ ಮತ್ತು ಹುಸೇನ್(23)ವರ್ಷ ಎಂದು ತಿಳಿದು ಬಂದಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು ರೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದಲ್ಲಿ ಬಿದ್ದು ಒದ್ದಾಡುತ್ತಿದ್ದ ಗಾಯಾಳುವಿಗೆ ನೀರು ಹಾಕಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ. ತಕ್ಷಣ ಆಂಬುಲೆನ್ಸ್ಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ಇನ್ನಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
إرسال تعليق