ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ನಿಧನ

ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ನಿಧನ

 


ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (72 ವರ್ಷ) ದ ಇವರು ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಕೆಲವು ದಿನಗಳ ಹಿಂದೆ ಆರೋಗ್ಯ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು.


ಡಯಾಲಿಸಿಸ್‌ ನಡೆಸುವಾಗ ಹೃದಯದ ಬಡಿತ ಕಡಿಮೆಯಾಗಿತ್ತು. ಆಂತರಿಕ ರಕ್ತಸ್ರಾವ ಕೂಡ ಉಂಟಾಗಿತ್ತು. ಹೀಗಾಗಿ ಗುರುವಾರದಿಂದ ಅವರಿಗೆ ವೆಂಟಿಲೇಟರ್‌ ಅಳವಡಿಸಿ ಕೃತಕ ಉಸಿರಾಟ ನಡೆಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಅವರು ಕೊನೆಯುಸಿರೆಳೆದರು ಎಂದು ಅವರ ಪುತ್ರ ಆಕಾಶ್ ತಿಳಿಸಿದ್ದಾರೆ.


ಕನ್ನಡ ಚಿತ್ರರಂಗದಲ್ಲಿ ಸ್ವಲ್ಪಕಾಲ ಬಹುಬೇಡಿಕೆಯ ಪೋಷಕ ನಟನಾಗಿ ಸತ್ಯಜಿತ್ ಗುರುತಿಸಿಕೊಂಡಿದ್ದರು. 600ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದರು.


ಅರುಣರಾಗ, ಅಂತಿಮ ತೀರ್ಪು, ಶಿವ ಮೆಚ್ಚಿದ ಕಣ್ಣಪ್ಪ, ರಣರಂಗ, ನಮ್ಮೂರ ರಾಜ, ನ್ಯಾಯಕ್ಕಾಗಿ ನಾನು, ಯುದ್ಧಕಾಂಡ, ಇಂದ್ರಜಿತ್, ನಮ್ಮೂರ ಹಮ್ಮೀರ, ಪೊಲೀಸ್ ಲಾಕಪ್, ಮನೆದೇವ್ರು, ಮಂಡ್ಯದ ಗಂಡು, ಪೊಲೀಸ್ ಸ್ಟೋರಿ, ಸರ್ಕಲ್ ಇನ್ಸ್‌ಪೆಕ್ಟರ್‌, ಪಟೇಲ, ದುರ್ಗದ ಹುಲಿ, ಅಪ್ಪು, ಧಮ್, ಅಭಿ, ಆಪ್ತಮಿತ್ರ, ಅರಸು, ಇಂದ್ರ, ಭಾಗ್ಯದ ಬಳೆಗಾರ, ಕಲ್ಪನಾ, ಗಾಡ್‌ ಫಾದರ್‌, ಲಕ್ಕಿ, ಉಪ್ಪಿ-2, ಮಾಣಿಕ್ಯ, ರನ್ನ, ರಣ ವಿಕ್ರಮ, ಮೈತ್ರಿ- ಹೀಗೆ ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದರು.

0 Comments

Post a Comment

Post a Comment (0)

Previous Post Next Post