ತುಮಕೂರು: ಶಾಲಾ ವಾಹನ ಪಲ್ಟಿಯಾಗಿ ಹತ್ತು ಮಕ್ಕಳು ಗಾಯಗೊಂಡಿರುವ ಘಟನೆಯೊಂದು ಕೊರಟಗೆರೆ ತಾಲೂಕಿನ ಕಾಶಾಪುರ ಬಳಿ ನಡೆದಿದೆ. ಬೈಚಾಪುರ ಸಮೀಪದ ಖಾಸಗಿ ಶಾಲೆಯ ವಾಹನ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದ್ದು, ಸುಮಾರು ಹತ್ತು ಮಕ್ಕಳು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಪಘಾತವಾಗುತ್ತಿದ್ದಂತೆಯೇ ಶಾಲೆಯ ವಾಹನ ಚಾಲಕ ಪರಾರಿಯಾಗಿದ್ದಾನೆ.
ಚಾಲಕ ಪಾನಮತ್ತನಾಗಿ ವಾಹನ ಚಾಲನೆ ಮಾಡಿದ್ದಲ್ಲದೇ ಅತಿವೇಗ ಮತ್ತು ಅವೈಜ್ಞಾನಿಕ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Post a Comment