ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ನಟ ಸತ್ಯಜಿತ್‌ ಆರೋಗ್ಯ ಮತ್ತಷ್ಟು ಕ್ಷೀಣ

ಹಿರಿಯ ನಟ ಸತ್ಯಜಿತ್‌ ಆರೋಗ್ಯ ಮತ್ತಷ್ಟು ಕ್ಷೀಣ

 


ಬೆಂಗಳೂರು : ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ಕಳೆದ 6 ದಿನಗಳಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬುಧವಾರದವರೆಗೆ ಇವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು.

ಆದರೆ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಜೊತೆಗೆ ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದೆ. ಈ ಕಾರಣದಿಂದ ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ.


ಹೀಗಾಗಿ ಸ್ವಲ್ಪ ಚೇತರಿಸಿಕೊಂಡ ಬಳಿಕ ಡಯಾಲಿಸೀಸ್ ಮಾಡಲು ವೈದ್ಯರು ತಿಳಿಸಿದ್ದಾರೆ. ಎಂದು ಸತ್ಯಜಿತ್ ಪುತ್ರ ಆಕಾಶ್ ಮಾಹಿತಿ ನೀಡಿದ್ದಾರೆ. ವಯಸ್ಸು 70 ದಾಟಿರುವ ಕಾರಣ ಇವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ.

0 Comments

Post a Comment

Post a Comment (0)

Previous Post Next Post