ಬೆಂಗಳೂರು : ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ಕಳೆದ 6 ದಿನಗಳಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬುಧವಾರದವರೆಗೆ ಇವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು.
ಆದರೆ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಜೊತೆಗೆ ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದೆ. ಈ ಕಾರಣದಿಂದ ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ.
ಹೀಗಾಗಿ ಸ್ವಲ್ಪ ಚೇತರಿಸಿಕೊಂಡ ಬಳಿಕ ಡಯಾಲಿಸೀಸ್ ಮಾಡಲು ವೈದ್ಯರು ತಿಳಿಸಿದ್ದಾರೆ. ಎಂದು ಸತ್ಯಜಿತ್ ಪುತ್ರ ಆಕಾಶ್ ಮಾಹಿತಿ ನೀಡಿದ್ದಾರೆ. ವಯಸ್ಸು 70 ದಾಟಿರುವ ಕಾರಣ ಇವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ.
إرسال تعليق