ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗರ್ಭಿಣಿ ಯುವತಿ ಅನುಮಾನಸ್ಪದವಾಗಿ ಸಾವು

ಗರ್ಭಿಣಿ ಯುವತಿ ಅನುಮಾನಸ್ಪದವಾಗಿ ಸಾವು

 


ಕೋಲಾರ: ಮಗುವಿನ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಯುವತಿಯೊಬ್ಬಳು ಕೃಷಿ ಹೊಂಡದಲ್ಲಿ ಮೃತಪಟ್ಟಿರುವುದು ಪತ್ತೆಯಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಮರಿಮಾಕನಪಲ್ಲಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸುಕನ್ಯಾ(22) ವರ್ಷ ಮೃತ ಯುವತಿ.

ಈಕೆಗೆ ಒಂದು ವರ್ಷದ ಹಿಂದೆ ವಿವಾಹವಾಗಿತ್ತು. ಹಾಗೆಯೇ 3 ತಿಂಗಳ ಗರ್ಭಿಣಿಯಾಗಿದ್ದಳು. ಮಗುವಿನ ನಿರೀಕ್ಷೆಯಲ್ಲಿದ್ದ ಸುಕನ್ಯಾ ಕೃಷಿ ಹೊಂಡದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಬಂದ ಶ್ರೀನಿವಾಸಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post