ಬೆಂಗಳೂರು: ಇಲ್ಲಿನ ವಿದ್ಯಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ನವವಿವಾಹಿತ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ವರದಿಯಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕ ಸಾಗರ್ (24 ವರ್ಷ) ಮತ್ತು ಆತನ ಪತ್ನಿ ಸಾವನ್ನಪ್ಪಿದ್ದಾರೆ.
ಆರು ತಿಂಗಳ ಹಿಂದೆ ಇವರಿಗೆ ವಿವಾಹವಾಗಿದ್ದು, ಜೀವನಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ದಂಪತಿ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ದಂಪತಿ ತಮ್ಮ ಸಂಬಂಧಿಕರ ಫೋನ್ ನಂಬರ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.
ನಾಲ್ಕು ದಿನಗಳ ಹಿಂದೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಶವಗಳು ಕೊಳೆತ ಸ್ಥಿತಿ ತಲುಪಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಸಂಬಂಧಿಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಿಂದ ಬಂದಿರುವ ವಲಸೆ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.
إرسال تعليق