ಬೆಂಗಳೂರು: ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಿದೆ. ಪಠ್ಯಕ್ರಮ ಕಡಿತ ಮಾಡುವ ಆಲೋಚನೆ ಇಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆಯಲಾಗುವುದು.
ಪಠ್ಯಕ್ರಮ ಕಡಿತ ಮಾಡುವ ಯಾವುದೇ ಯೋಚನೆಯಿಲ್ಲ ಎಂದು ತಿಳಿಸಿದ್ದಾರೆ.
ಶನಿವಾರ, ಭಾನುವಾರವೂ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತು ಪರಿಶೀಲನೆ ನಡೆಸಲಾಗಿದೆ.
ಹಾಗೆ ಹತ್ತು ದಿನಗಳ ಒಳಗೆ ಉಳಿದ ತರಗತಿ ಆರಂಭಿಸಲಿದ್ದು, ಪರೀಕ್ಷೆಗೆ ಅಗತ್ಯವಿದ್ದಲ್ಲಿ ಮಾತ್ರ ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಜನವರಿ, ಫೆಬ್ರವರಿಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ.
إرسال تعليق