ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಹರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ (50 ವರ್ಷ), ಎನ್ ಕೋಡಿಹಳ್ಳಿ ಗ್ರಾಮದ ಲೋಕೇಶ (44 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Post a Comment