ವಿಜಯಪುರ: ಕಲುಷಿತ ನೀರನ್ನು ಸೇವಿಸಿ ಇಬ್ಬರು ಸಾವನ್ನಪ್ಪಿದ ಘಟನೆಯೊಂದು ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಗ್ರಾಮದಲ್ಲಿ ನಡೆದಿದೆ. ನಳ್ಳಿ ನೀರಿಗೆ ಚರಂಡಿ ನೀರು ಸೇರ್ಪಡೆ ಆಗಿರುವ ಕಾರಣ ಕಲುಷಿತ ನೀರು ಪೂರೈಕೆ ಮಾಡಲಾಗಿದೆ.
ಕಲುಷಿತ ನೀರು ಸೇವನೆ ಮಾಡಿರುವ ಗ್ರಾಮದ ನಿವಾಸಿ ಸಾವಿಗೀಡಾಗಿದ್ದು, ಯರಗಲ್ ಗ್ರಾಮದ ಗುರುರಾಜ್ ಬಸವರಾಜ ಮಳಗಿ (15 ವರ್ಷ) ಹಾಗೂ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ (65 ವರ್ಷ) ಮೃತಪಟ್ಟಿದ್ದಾರೆ.
ವಾಂತಿ ಭೇದಿಯಿಂದ ಗ್ರಾಮದ ಎಂಟು ಜನರು ಬಳಲುತ್ತಿದ್ದಾರೆ. ಎಂಟು ಜನರಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಳಚೆ ನೀರು ಕುಡಿವ ನಳ್ಳಿಗೆ ನೀರಿಗೆ ಸಂಪರ್ಕ ಹೊಂದಿದರೂ ಎಚ್ಚೆತ್ತುಕೊಳ್ಳದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಎಂದು ಆಕ್ರೋಶ ವ್ಯಕ್ತವಾಗಿದೆ.
ಆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಯರಗಲ್ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದಲ್ಲಿ ಆರೋಗ್ಯಾಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ.
Post a Comment