ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದ್ವಿಚಕ್ರ ವಾಹನ ಮತ್ತು ಕಾರು ಅಪಘಾತ; ಸವಾರ ಸಾವು

ದ್ವಿಚಕ್ರ ವಾಹನ ಮತ್ತು ಕಾರು ಅಪಘಾತ; ಸವಾರ ಸಾವು

 


ಉಡುಪಿ: ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆಯೊಂದು ಮಂಗಳವಾರ ನಡೆದಿದೆ.


ಮೃತರನ್ನು ಮಂಡ್ಯ ಮೂಲದ ನಾಗರಾಜು (40)ವರ್ಷ ಎಂದು ಗುರುತಿಸಲಾಗಿದೆ.

ಚಲಿಸುತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.


ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು ಕೆಲಸದ ನಿಮಿತ್ತ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ.

ಸ್ಥಳಕ್ಕೆ ಬ್ರಹ್ಮಾವರ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم