ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಎಂಟು, ಒಂಬತ್ತು ಹಾಗೂ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗಾಗಿ ಎನ್‍ಟಿಎಸ್‍ಇ, ಎನ್‍ಡಿಎ, ಕೆವಿಪಿವೈ, ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಫೌಂಡೇಶನ್ ಕೋರ್ಸ್‍ನ ಉದ್ಘಾಟನಾ ಸಮಾರಂಭ ಅಕ್ಟೋಬರ್ 12ರಂದು ನಡೆಯಲಿದೆ. ಈ ತರಬೇತಿ ಕೇವಲ ಅಂಬಿಕಾ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರದೆ, ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ತರಬೇತಿಯು ಪ್ರತಿ ಶನಿವಾರ ಹಾಗೂ ಭಾನುವಾರದಂದು ನಡೆಯಲಿದೆ.
ಈ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಫೌಂಡೇಶನ್ ಕೋರ್ಸ್‍ನ ಮಹತ್ವ, ತರಬೇತಿಯ ಸ್ವರೂಪ ಹಾಗೂ ವಿಧಾನಗಳ ಬಗೆಗೆ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನಡೆಯಲಿದ್ದು, ಆಸಕ್ತ ಹೆತ್ತವರು ಹಾಗೂ ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಭಾಗಿಯಾಗಿ ಪ್ರಯೋಜನ ಪಡೆದುಕೊಳ್ಳಬಹುದು. ಕಾರ್ಯಕ್ರಮ ಬೆಳಗ್ಗೆ ಹತ್ತು ಗಂಟೆಯಿಂದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
“ಸ್ಕೂಲ್ ಮಟ್ಟದಿಂದಲೇ ಎನ್‍ಟಿಎಸ್‍ಇ, ಎನ್‍ಡಿಎ, ಕೆವಿಪಿವೈ, ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆಗಳಿಗೆ ತಯಾರಾಗುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನ ದೊರಕುವುದಕ್ಕೆ ಸಾಧ್ಯ. ಸಣ್ಣ ತರಗತಿಗಳಿಂದಲೇ ಗುರಿಯನ್ನು ನಿಗದಿಪಡಿಸಿಕೊಂಡು ಅಧ್ಯಯನಶೀಲರಾದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದು ಉತ್ಕøಷ್ಟ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿ ಮಾಡಿಸಿಕೊಳ್ಳಬಹುದು. ಈ ನೆಲೆಯಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ತರಬೇತಿ ಕಾರ್ಯಕ್ರಮ ನಡೆಯಲಿದೆ. ಯಾವುದೇ ಹೈಸ್ಕೂಲ್‍ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಶನಿವಾರ ಹಾಗೂ ಭಾನುವಾರದಂದು ನಡೆಯುವ ಈ ತರಗತಿಗಳಿಗೆ ದಾಖಲಾತಿ ಮಾಡಿಸಿಕೊಳ್ಳಬಹುದು”.
-ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿಗಳು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment