ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಟ್ಲ; ಯುವತಿಯ ಶವ ಮನೆಯೊಂದರ ಕೆರೆಯಲ್ಲಿ ಪತ್ತೆ

ವಿಟ್ಲ; ಯುವತಿಯ ಶವ ಮನೆಯೊಂದರ ಕೆರೆಯಲ್ಲಿ ಪತ್ತೆ

 


ವಿಟ್ಲ : ಯುವತಿಯ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾಗಿರುವ ಘಟನೆಯೊಂದು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. 

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ (22 ವರ್ಷ) ಎಂದು ಗುರುತಿಸಲಾಗಿದೆ.

ನಿಶ್ಮಿತಾ ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. 

ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿದ್ದಾರೆ ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.

0 تعليقات

إرسال تعليق

Post a Comment (0)

أحدث أقدم