ದಾವಣಗೆರೆ: ಜಿಲ್ಲೆಯಲ್ಲಿ ತುಂತುರು ಮಳೆ ಕಾರಣದಿಂದ ಕಂಬದಲ್ಲಿಯೂ ವಿದ್ಯುತ್ ಪ್ರವಹಿಸುತ್ತಿತ್ತು. ಈ ಬಗ್ಗೆ ತಿಳಿಯದೆ ಕಂಬವನ್ನು ಮುಟ್ಟಿದ್ದ ಯುವಕ ಸಾವನ್ನಪ್ಪಿದ್ದಾನೆ.
ದಾವಣಗೆರೆಯ ಯಲ್ಲಮ್ಮ ನಗರದ ಕುಂದುವಾಡ ರಸ್ತೆಯ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಭರತ್ ಕಾಲೋನಿ ಮನೋಜ್ ಮಜ್ಜಿಗೆ (23 ವರ್ಷ) ಮೃತ ದುರ್ದೈವಿ.
ಮೂತ್ರ ವಿಸರ್ಜನೆಗೆ ಹೋದ ವೇಳೆ ವಿದ್ಯುತ್ ಕಂಬ ಗ್ರೌಂಡ್ ಆಗಿ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪೊಲೀಸರು, ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಿದ್ದಾರೆ.
إرسال تعليق