ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗ್ರಾ.ಪಂ ಗ್ರಾಮ ಸಭೆಗಳಿಗೆ ಪ್ರಾಥಮಿಕ ಸಹಕಾರ ಸಂಘಗಳಿಗೆ ಆಹ್ವಾನ ನೀಡಲು ಮನವಿ

ಗ್ರಾ.ಪಂ ಗ್ರಾಮ ಸಭೆಗಳಿಗೆ ಪ್ರಾಥಮಿಕ ಸಹಕಾರ ಸಂಘಗಳಿಗೆ ಆಹ್ವಾನ ನೀಡಲು ಮನವಿ


ಬಂಟ್ವಾಳ: ಗ್ರಾಮ ಪಂಚಾಯತ್ ಗ್ರಾಮ ಸಭೆಗಳಿಗೆ ಪ್ರಾಥಮಿಕ ಸಹಕಾರ ಸಂಘಗಳಿಗೆ ಆಹ್ವಾನ ನೀಡಬೇಕೆಂದು  ಕುರಿತು ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಟಿ.ಪಿ ಪ್ರಭಾಕರ ಪ್ರಭು ಅವರು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಗಳಲ್ಲಿ ವಾರ್ಷಿಕ ಎರಡು ಗ್ರಾಮ ಸಭೆಗಳು ಸೇರಿದಂತೆ ಕೆಡಿಪಿ ಸಭೆಗಳು ನಡೆಯುತ್ತಿರುತ್ತವೆ. ಈ ಗ್ರಾಮ ಸಭೆ, ಕೆಡಿಪಿ ಸಭೆಗಳಲ್ಲಿ ಗ್ರಾಮ ಪಂಚಾಯತ್ ಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಎಲ್ಲಾ ಸರಕಾರಿ ಇಲಾಖಾಧಿಕಾರಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯವರು ಭಾಗವಹಿಸುವುದು ವಾಡಿಕೆಯಾಗಿದೆ.


ಗ್ರಾಮ ಸಭೆಗಳಲ್ಲಿ ಗ್ರಾಮಾಂತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ರೈತರಿಗೆ ಸರಕಾರದಿಂದ ಸಿಗುವ ಸಾಲ ಸೌಲಭ್ಯ ಗಳಾದ ಶೂನ್ಯ ಬಡ್ಡಿ ಸಾಲ ಯೋಜನೆ, ಕೃಷಿ ಅಭಿವೃದ್ಧಿ ಸಾಲ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಸೇರಿದಂತೆ ಸರಕಾರದ ಸಹಕಾರ ಇಲಾಖೆಯಿಂದ ಸಿಗುವ ಸಾಲ ಯೋಜನೆಗಳು ಗ್ರಾಮ ಸಭೆಯ ಮುಲಕ ಕೃಷಿಕರಿಗೆ ತಲುಪಿದಾಗ ಎಲ್ಲಾ ಸಾಲ ಸೌಲಭ್ಯಗಳು ಎಲ್ಲಾ ರೈತರಿಗೂ ಲಭಿಸುವಂತಾಗುತ್ತದೆ.


ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಗಳಲ್ಲಿ ವರ್ಷಕ್ಕೆ ಎರಡು ಬಾರಿ ನಡೆಯುವ ಗ್ರಾಮ ಸಭೆ, ಕೆಡಿಪಿ ಸಭೆಗಳಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ಪ್ರಾಥಮಿಕ ಸಹಕಾರ ಸಂಘಗಳಿಗೆ ಸಹ ಆಹ್ವಾನ ನೀಡುವಂತೆ ಗ್ರಾಮ ಪಂಚಾಯತ್ ಗ್ರಾಮ ಸಭೆ ನಿಯಮಾವಳಿ ಸುತ್ತೋಲೆಯಲ್ಲಿ ವಿಷಯ ಸೇರ್ಪಡೆ ಮಾಡಲು ತಮ್ಮ ಇಲಾಖಾ ಅಧಿಕಾರಿಗಳಿಗೆ ಆದೇಶ ನೀಡುವಂತೆ ಕೋರಲಾಗಿದೆ ಎಂದು ಪ್ರಭಾಕರ ಪ್ರಭು ಮನವಿಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم