ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೈಕ್ ಸ್ಕಿಡ್ ಆಗಿ ಇಬ್ಬರೂ ಸವಾರರು ಸಾವು

ಬೈಕ್ ಸ್ಕಿಡ್ ಆಗಿ ಇಬ್ಬರೂ ಸವಾರರು ಸಾವು

 


ರಾಯಚೂರು: ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆಯೊಂದು ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.

ಮೃತರನ್ನು ದೀಪಕ್ (22)ವರ್ಷ , ಹುಸೇನ್ (23)ವರ್ಷ ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ನಗರದ ತಿಮ್ಮಾಪೂರ ಪೇಟೆ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. 

ತಮ್ಮ ಸಹೋದರನನ್ನು ಬೈಕ್‌ನಲ್ಲಿ ಕರೆದುಕೊಂಡು ಬರಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಯರಗೇರಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ‌ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم