ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ವಚ್ಚತೆಯಿಂದಲೇ ಸಮಾಜದ ಸ್ವಾಸ್ಥ್ಯ ಸಾಧ್ಯವಾಗುತ್ತದೆ: ಡಾ. ಚೂಂತಾರು

ಸ್ವಚ್ಚತೆಯಿಂದಲೇ ಸಮಾಜದ ಸ್ವಾಸ್ಥ್ಯ ಸಾಧ್ಯವಾಗುತ್ತದೆ: ಡಾ. ಚೂಂತಾರು

ಕಡಬ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ


ಕಡಬ: ಕಡಬ ಗೃಹರಕ್ಷಕದಳ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ ಭಾನುವಾರ (ಅ.10) ನಡೆಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲಿ ಮೋಹನ್ ಚೂಂತಾರು ಭಾಗವಹಿಸಿ ಗೃಹರಕ್ಷಕರ ಕುಂದು ಕೊರತೆಗಳನ್ನು ಆಲಿಸಿ, ಸ್ವಚ್ಚತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಮತ್ತು ಶಾಲಾ ಮುಖ್ಯ ಗುರುಗಳಾದ ಶ್ರೀಯುತ ಹಮೀದ್ ಇವರು ಸ್ಚಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿದರು.


ಪರಿಸರದ ಸ್ವಚ್ಚತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರೀಕರ ಆದ್ಯ ಕರ್ತವ್ಯವಾಗಿರುತ್ತದೆ. ಸ್ವಚ್ಚ ಪರಿಸರ, ಸ್ವಚ್ಚ ನೀರು, ಸ್ವಚ್ಚ ಗಾಳಿಯಿಂದ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಸುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ, ಫಲವತ್ತಾದ ಭೂಮಿಯನ್ನು ಕಾಪಾಡಿಕೊಂಡು ಪರಿಸರ ರಕ್ಷಿಸಿಕೊಂಡಲ್ಲಿ ಆರೋಗ್ಯಪೂರ್ಣ ಸಮೃದ್ಧ ಸಮಾಜದ ನಿರ್ಮಾಣ ಸಾಧ್ಯವಿದೆ ಎಂದು ಸಮಾದೇಷ್ಟರಾದ ಡಾ. ಮರಲೀ ಚೂಂತಾರು ನುಡಿದರು.


ಈ ಕಾರ್ಯಕ್ರಮಕ್ಕೆ ಹಿರಿಯ ಗೃಹರಕ್ಷಕರಾದ ಸೆಕ್ಷನ್‌ ಲೀಡರ್ ಉದಯಶಂಕರ್, ವಾಣಿ, ಮೋನಪ್ಪ,ರವಿ, ಮೀನಾಕ್ಷಿ, ಪ್ರಮಿತ, ಕುಸುಮ, ಪವಿತ್, ಮೊದಲಾದವರು ಉಪಸ್ಥಿತರಿದ್ದರು. ಕಡಬ ಘಟಕದ ಪ್ರಭಾರ ಘಟಕಾಧಿಕಾರಿ ತೀರ್ಥೇಶ್ ಅಮೈ ಅವರು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಿಗೆ ಗೌರವ ವಂದನೆ ಸಲ್ಲಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post