ಉಡುಪಿ: ಮಣಿಪಾಲದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್‌ಸ್ಟಿಟ್ಯುಶನ್ಸ್ನ ದ್ವಿತೀಯ ಬಿಕಾಂ ವಿದ್ ಏಯೇಷನ್ ಆ್ಯಂಡ್ ಹಾಸ್ಪಿಟ್ಯಾಲಿಟಿ ಮ್ಯಾನೇಜ್‌ಮೆಂಟ್ ವಿಭಾಗದ ವಿದ್ಯಾರ್ಥಿ ಸನಾ ಇವರು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 19 ವರ್ಷದ ಮತ್ತು 44ಕೆ ಜಿ ಒಳಗಿನ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಮೊದಲ ಸ್ಥಾನ ಪಡೆದಿರುತ್ತಾರೆ.
ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ನಡೆದ ಯುವ ದಸರಾ ಪ್ರಯುಕ್ತ 1ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ `ಶಿವಮೊಗ್ಗ ದಸರಾ-2021' ರಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಸನಾ ಅವರು ಗದಗದಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಬಾಲಕಿಯರ ಕರಾಟೆಯಲ್ಲಿ ಕೂಡ ಚಿನ್ನದ ಪದಕ ಗಳಿಸಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق