ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಿವಂಗತ ಕಿರಣ್ ಕುಮಾರ್‌ಗೆ ಗೃಹರಕ್ಷಕದಳ ಶ್ರದ್ಧಾಂಜಲಿ

ದಿವಂಗತ ಕಿರಣ್ ಕುಮಾರ್‌ಗೆ ಗೃಹರಕ್ಷಕದಳ ಶ್ರದ್ಧಾಂಜಲಿ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿ ಮಂಗಳೂರು, ಇಲ್ಲಿ ದ್ವಿತೀಯ ದರ್ಜಿ ಸಹಾಯಕ, ಬೆರಳಚ್ಚುಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ್ ಕುಮಾರ್ ಇವರು ಗುರುವಾರ (ಅ.28) ನಿಧನರಾದರು.  ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಿ ಇಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಕಿರಣ್ ಅವರ ಅಕಾಲಿಕ ಮರಣದಿಂದ ಗೃಹರಕ್ಷಕ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಈ ನೋವನ್ನು ಮರೆಯುವ ಶಕ್ತಿಯನ್ನು ಆ ದೇವರು ಕರುಣಿಸಲೆಂದು ನಾವೆಲ್ಲರೂ ಪ್ರಾರ್ಥಿಸೋಣವೆಂದು ನುಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್, ಪ್ರಥಮ ದರ್ಜಿ ಸಹಾಯಕಿ ಅನಿತಾ, ದಲಾಯತ್ ಮೀನಾಕ್ಷಿ, ಗೃಹರಕ್ಷಕರಾದ ದಿವಾಕರ್, ಜಯಲಕ್ಷ್ಮಿ ಮತ್ತು ಸುಲೋಚನ ಇವರುಗಳು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم