ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗೃಹರಕ್ಷಕದಳ ಉಪ್ಪಿನಂಗಡಿ, ಪುತ್ತೂರು, ಕಡಬ ಸಂಯುಕ್ತ ಆಶ್ರಯದಲ್ಲಿ 17ರಂದು ರಕ್ತದಾನ ಶಿಬಿರ

ಗೃಹರಕ್ಷಕದಳ ಉಪ್ಪಿನಂಗಡಿ, ಪುತ್ತೂರು, ಕಡಬ ಸಂಯುಕ್ತ ಆಶ್ರಯದಲ್ಲಿ 17ರಂದು ರಕ್ತದಾನ ಶಿಬಿರ



ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಉಪ್ಪಿನಂಗಡಿ, ಪುತ್ತೂರು, ಕಡಬ ಗೃಹರಕ್ಷಕದಳ ವತಿಯಿಂದ ಹಾಗೂ ತೆಜಸ್ವಿನಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಅ.17ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಉಪ್ಪಿನಂಗಡಿ ಸ.ಮಾ.ಉ.ಹಿ.ಪ್ರಾ. ಶಾಲೆ ಸಭಾಂಗಣದಲ್ಲಿ ಗೃಹರಕ್ಷಕದಳ ವತಿಯಿಂದ ರಕ್ತದಾನ ಶಿಬಿರ ಅಯೋಜಿಸಲಾಗಿದೆ.


ರಕ್ತದಾನ ಶಿಬಿರವನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರೊಬೆಷನರಿ DySp ಧನ್ಯ ನಾಯಕ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಠರಾದ ಡಾ||ಮುರಲೀ ಮೋಹನ್ ಚೂಂತಾರು ವಹಿಸಲಿದ್ದಾರೆ.


ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಡೆಪ್ಯುಟಿ ಕಮಾಡೆಂಟ್ ರಮೇಶ್, ಉಪ್ಪಿನಂಗಡಿ ಪೋಲಿಸ್ ಠಾಣಾ ಪ್ರೊಬೆಷನರಿ ಪೋಲಿಸ್ ಉಪ ನೀರಿಕ್ಷಕರಾದ ಅನಿಲ್ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ದೇವಕಿ ಎಂ. ಮತ್ತು ಎಸ್.ಡಿ.ಎಮ್.ಸಿ ಸಮನ್ವಯ ವೇದಿಕೆಯ ರಾಜ್ಯಾಧ್ಯಕ್ಷ ಮೊಯ್ದಿನ್ ಕುಟ್ಟಿ ಭಾಗವಹಿಸಲಿದ್ದಾರೆ. ರಕ್ತದಾನ ಶಿಬಿರದಲ್ಲಿ ಆಸಕ್ತ ಸಾರ್ವಜನಿಕರು ಭಾಗವಹಿಸಬಹುದು ಎಂದು ಉಪ್ಪಿನಂಗಡಿ ಗೃಹರಕ್ಷಕದಳ ಪ್ರಕಟಣೆಯಲ್ಲಿ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم