ಸಾಗರ: ಆಸ್ಪತ್ರೆಯಲ್ಲಿ ಪತಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವಾಗ ಇಲ್ಲಿ ಮನೆಯಲ್ಲಿ ಆತನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರ ಕೆಳದಿ ರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಪೂರ್ಣಿಮಾ(40)ವರ್ಷ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಮೃತ ಮಹಿಳೆಯ ಪತಿ ಪಡಿತರ ಅಂಗಡಿ ನಡೆಸುತ್ತಿದ್ದು, ಅನಾರೋಗ್ಯದ ಕಾರಣ ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಮಹಿಳೆ ನೇಣಿಗೆ ಶರಣಾಗುವಾಗ ಅವರ ಮನೆಯಲ್ಲಿ ದಂಪತಿಗಳ ವಿಶಿಷ್ಟ ಚೇತನ ಮಗನೋರ್ವ ಇದ್ದ ಎನ್ನಲಾಗಿದೆ. ಈ ಬಗ್ಗೆ ನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
إرسال تعليق