ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 5 ಕೆಜಿ ಉಚಿತ ಪಡಿತರ ಮಾರ್ಚ್ ವರೆಗೆ ವಿಸ್ತರಣೆ

5 ಕೆಜಿ ಉಚಿತ ಪಡಿತರ ಮಾರ್ಚ್ ವರೆಗೆ ವಿಸ್ತರಣೆ

 


ನವದೆಹಲಿ: ಕೋವಿಡ್ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು.

ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು ಸರ್ಕಾರ 2.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದಂತಾಗುತ್ತದೆ. ಪಡಿತರ ಚೀಟಿದಾರರಿಗೆ ನೀಡುವ ಪಡಿತರದ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲಾಗುವುದು.

0 Comments

Post a Comment

Post a Comment (0)

Previous Post Next Post