ವರುಣಾ (ಮೈಸೂರು): ಇಲ್ಲಿಯ ಎಂ.ಬಿ.ಹಳ್ಳಿ ನಾಗೇಂದ್ರ ಎನ್ನುವವರ ತೋಟದ ಬಳಿ ಶುಕ್ರವಾರ ಚಿರತೆ ಬೋನಿಗೆ ಬಿದ್ದಿದೆ. ಈ ಭಾಗದಲ್ಲಿ ಕೆಲವು ದಿನಗಳಿಂದ ಚಿರತೆ ಓಡಾಡುವುದನ್ನು ಗಮನಿಸಿದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಸುಮಾರು ಐದು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಪಶು ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ನಾಗರಹೊಳೆ ಅರಣ್ಯಕ್ಕೆ ಬಿಡಲಾಗುವುದು' ಎಂದು ವಲಯ ಅರಣ್ಯಾಧಿಕಾರಿ ವಿಜಯಕುಮಾರ ಮಾಹಿತಿ ನೀಡಿದರು.
Post a Comment