ಬೆಂಗಳೂರು: ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 2022-23ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ 2022 ರಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವೇಳೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಂದ ಪ್ರಮಾಣ ಪತ್ರಗಳನ್ನು ದೃಢೀಕರಿಸಿ ಸಲ್ಲಿಸುವುದು ಕಡ್ಡಾಯವಾಗಿದೆ ಎನ್ನಲಾಗಿದೆ.
2022 ರ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪೋರ್ಟಲ್ ತೆರೆಯಲಾಗಿದೆ. ಅರ್ಹ ಅಭ್ಯರ್ಥಿಗಳು www.navodaya.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಆಡಳಿತಾತ್ಮಕ ಕಾರಣಗಳಿಗಾಗಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಎಲ್ಲ ಅಭ್ಯರ್ಥಿಗಳು ಪರಿಷ್ಕೃತ ಅರ್ಜಿ ಫಾರಂಗಳನ್ನು ತುಂಬಬೇಕು ಮತ್ತು ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿದ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಬೇಕು.
Post a Comment