ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ತರಬೇತಿ ಕೇಂದ್ರ, ಹಾಗೂ ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ವತಿಯಿಂದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನವೆಂಬರ್ 6 ಮತ್ತು 7ರಂದು ಇನ್ಫೋಸಿಸ್ನ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿ ಇಂದು ರಾವ್ ರವರಿಂದ ಬ್ರೈನ್ ಸ್ಟಾರ್ಮಿಂಗ್ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ. ಹೆಸರು ನೋಂದಾಯಿಸಿಕೊಂಡಿರುವ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 8 ರಿಂದ ಇನ್ಫೋಸಿಸ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಫೋನ್ ಮೂಲಕ ಉದ್ಯೋಗ ಸಂದರ್ಶನ ಆರಂಭಿಸಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಈ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದಾಗಿದೆ, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment