ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಖಾಸಗಿ ಬಸ್ ಮತ್ತು ಕಾರು ಅಪಘಾತ; ಓರ್ವ ಸಾವು

ಖಾಸಗಿ ಬಸ್ ಮತ್ತು ಕಾರು ಅಪಘಾತ; ಓರ್ವ ಸಾವು


 

ಹುಬ್ಬಳ್ಳಿ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆಯೊಂದು ಇಲ್ಲಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ತಾರಿಹಾಳ ಬಳಿ ನಡೆದಿದೆ.


ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಕಾರು, ಹಾಗೂ ಹುಬ್ಬಳ್ಳಿ ಕಡೆಯಿಂದ ಧಾರವಾಡ ಕಡೆಗೆ ಹೊರಟ್ಟಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅವರನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತ ಹಾಗೂ ಗಾಯಗೊಂಡರ ಕುರಿತು ಸಂಪೂರ್ಣ ಮಾಹಿತಿ ದೊರೆತಿಲ್ಲ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಕೂಡಾ ಹಾನಿಯಾಗಿದೆ. ಸ್ಥಳಕ್ಕೆ ಸಂಚಾರ ಪೋಲಿಸರು ಬಂದು ಪರಿಶೀಲನೆ ನಡೆಸಿದ್ದಾರೆ.


0 Comments

Post a Comment

Post a Comment (0)

Previous Post Next Post