ಉಡುಪಿ : ಕಾರು ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆಯೊಂದು ಪಡುಬಿದ್ರಿಯ ಕೆಳಗಿನ ಪೇಟೆಯ ಹೆದ್ದಾರಿ ತಿರುವಿನಲ್ಲಿ ನಡೆದಿದೆ.
ಮೃತರನ್ನು ಪಾದೆಬೆಟ್ಟು ನಿವಾಸಿ ಬಾಲಕೃಷ್ಣ ಭಟ್ (74) ವರ್ಷ ಎಂದು ಗುರುತಿಸಲಾಗಿದೆ.
ಬಾಲಕೃಷ್ಣ ಭಟ್ ಅವರು ಮಂಗಳೂರು ಕಡೆಗೆ ಹೋಗುತ್ತಿದ್ದು, ಈ ವೇಳೆ ಉಡುಪಿ ಕಡೆಯಿಂದ ಬರುತ್ತಿದ್ದ ಕಾರು ಹಿಂಬದಿಯಿಂದ ಸ್ಕೂಟರ್‌ಗೆ ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ಅಪಘಾತ ಸಂಭವಿಸಿದ ಸ್ಥಳದಿಂದ ಸುಮಾರು 25 ಅಡಿ ದೂರಕ್ಕೆ ಎಸೆಯಲ್ಪಟ್ಟರು.
ಕೂಡಲೇ ಜನರು ಭಟ್ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.
ಮಾರ್ಗ ಮಧ್ಯೆ ಅವರನ್ನು ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಯಿತು.
ಅತಿಯಾದ ರಕ್ತಸ್ರಾವದಿಂದ ಬಾಲಕೃಷ್ಣ ಭಟ್ ಅವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ.
Post a Comment