ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆರೆಗೆ ಕಾರು ಬಿದ್ದು ; ಮೂವರು ಸಾವು

ಕೆರೆಗೆ ಕಾರು ಬಿದ್ದು ; ಮೂವರು ಸಾವು

 



ಬೆಂಗಳೂರು: ಕೆರೆಗೆ ಕಾರು ಬಿದ್ದ ಪರಿಣಾಮ ಮೂವರು  ನೀರುಪಾಲದ ಘಟನೆಯೊಂದು ಬೆಂಗಳೂರು ದಕ್ಷಿಣ ತಾಲ್ಲೂಕಿನ ನೆಲಗುಳಿಯಲ್ಲಿ ನಡೆದಿದೆ.


ಕೆರೆಗೆ ಕಾರು ಬಿದ್ದು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಬ್ಬರನ್ನು ರಕ್ಷಿಸಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪುಂಡಲೀಕ, ಕಲ್ಲಪ್ಪ, ಕಿರಣ ಮೃತಪಟ್ಟವರು ಎಂದು ಹೇಳಲಾಗಿದೆ. ಇವರು ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಗಳಾಗಿದ್ದಾರೆ.

ಮಳೆಯಲ್ಲಿಯೇ ನಿನ್ನೆ ರಾತ್ರಿ ಕಾರಿನಲ್ಲಿ ಬರುತ್ತಿದ್ದಾಗ ದುರಂತ ಸಂಭವಿಸಿದೆ.

ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

0 تعليقات

إرسال تعليق

Post a Comment (0)

أحدث أقدم