ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಫ್ರೀಶಿಪ್ ಕಾರ್ಡ್ ಗಳನ್ನು ವಿತರಿಸಲಾಗುವುದು. ಶುಲ್ಕ ಪಾವತಿಸದೆ ವಿದ್ಯಾರ್ಥಿಗಳು ಉಚಿತವಾಗಿ ಕಾಲೇಜು ಪ್ರವೇಶ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆ ಆಗದಂತೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಆದರೆ, ತಾಂತ್ರಿಕ ತೊಂದರೆ ಕಾರಣ ಕೆಲವೊಮ್ಮೆ ವಿದ್ಯಾರ್ಥಿವೇತನ ತಡವಾಗುತ್ತದೆ.
ಹೀಗಾಗಿ ಫ್ರೀಶಿಪ್ ಕಾರ್ಡ್ ಯೋಜನೆ ಜಾರಿಗೆ ತರಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎಸ್.ಎಸ್.ಪಿ. ಪೋರ್ಟಲ್ ನಲ್ಲಿ ವಿದ್ಯಾರ್ಥಿವೇತನದ ನಂಬರ್ ನೀಡಲಾಗಿರುವ ಫ್ರೀಶಿಪ್ ಕಾರ್ಡ್ ಡೌನ್ಲೋಡ್ ಮಾಡಿಕೊಂಡು ಕಾಲೇಜು ಪ್ರವೇಶ ಪಡೆಯಬಹುದು.
ಕಾಲೇಜುಗಳ ಶುಲ್ಕವನ್ನು ಸಮಾಜ ಕಲ್ಯಾಣ ಇಲಾಖೆ ಪಾವತಿಸಲಿದೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಫ್ರೀಶಿಪ್ ಕಾರ್ಡ್ ಯೋಜನೆ ಜಾರಿಗೆ ತರಲಾಗುವುದು ಎನ್ನಲಾಗಿದೆ.
إرسال تعليق