ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಇಂದು (ನ.26) IQAC ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು NSS ವತಿಯಿಂದ ಸಂವಿಧಾನ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಲಾಯಿತು.
ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪ್ರೊ. ಶೇಖರ್ ಇವರು ಪ್ರಸ್ತಾವಿಕ ನುಡಿಯೊಂದಿಗೆ ಕಾರ್ಯಕ್ರಮದ ಮುಖ್ಯ ಅಥಿತಿಗಳ ಕಿರು ಪರಿಚಯವನ್ನು ಮಾಡಿದರು.
ಭಾರತ ಸಂವಿಧಾನದ ಸೌಂದರ್ಯವೇ ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವ. ಸಂವಿಧಾನ ಎನ್ನುವುದು ಒಂದು ಕಾನೂನಿನ ಪುಸ್ತಕ ಅಲ್ಲ ಅದು ನಮ್ಮ ಬದುಕಿನ ಮಾರ್ಗಸೂಚಿ ಎಂದು ಬಹಳ ಅರ್ಥಪೂರ್ಣವಾಗಿ IQAC ಘಟಕದ ಸಂಯೋಜಕರಾದ ಪ್ರೊ. ರವಿಶಂಕರ್ ರವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಪ್ರೊ. ಒಲಿಂಡ ಅವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ|| ಆಶಾಲತಾ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಲ್ಲಿ ಸಂವಿಧಾನ ಎಂದರೇನು? ಸಂವಿಧಾನದ ಗುರಿಗಳೇನು? ಇಂದಿನ ಯುವ ಸಮುದಾಯದ ಜವಾಬ್ದಾರಿಗಳೇನು? ಎಂಬುದರ ಬಗ್ಗೆ ಬಹಳ ಅರ್ಥಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಅವರು ಕಾರ್ಯಕ್ರಮದ ಬಗೆಗೆ ಹಿತನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ NSSನ ಸಂಯೋಜನಾಧಿಕಾರಿಗಳಾದ ಪ್ರೊ. ಸಂತೋಷ್ ಪ್ರಭು ಹಾಗೂ ಪ್ರೊ. ರಾಜೇಶ್ವರಿರವರು ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವೀಕ್ಷ ಇವರು ಸ್ವಾಗತಿಸಿ ಅಶ್ವಿನಿ ಧನ್ಯವಾದವಿತ್ತರು. ತುಳಸಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment