ವಿಜಯನಗರ: ದಂಪತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ (ಅ.30) ರಂದು ನಡೆದಿದೆ.
ಮೃತ ದಂಪತಿ ರಾಮು ಮತ್ತು ಹೇಮಾ ಎಂದು ಗುರುತಿಸಲಾಗಿದೆ.
ಇಬ್ಬರು ವಿಜಯನಗರ ಜಿಲ್ಲೆಯ ಕೊಟ್ಟವಲಸ ಮಂಡಲದ ಚೀಪುರುವಲಸಾದಲ್ಲಿ ನೆಲೆಸಿದ್ದರು.
ರಾಮು ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿದ್ದ. ಕೆಲ ದಿನಗಳ ನಂತರ ಗಂಡ ಹೆಂಡತಿಯನ್ನು ಭೇಟಿಯಾಗಿ ಮತ್ತೆ ಕೆಲಸಕ್ಕೆಂದು ಹೊರ ಹೋದ ಕೆಲವೇ ಕ್ಷಣಗಳಲ್ಲಿ ಹೇಮಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪತ್ನಿಯ ಸಾವಿನ ಸುದ್ದಿ ತಿಳಿದ ರಾಮು ಕೂಡ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
إرسال تعليق