ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿದು ಈಗಾಗಲೇ ದೇಶದ ಜನ ತಮ್ಮ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರಲು ಮತ್ತೆ ಮೂರನೇ ಅಲೆ ದೇಶದೆಲ್ಲೆಡೆ ಆರ್ಭಟಿಸುತ್ತಿದೆ.
ಈಗಾಗಲೇ ರಾಜ್ಯದ ಕೆಲ ಸಂಸ್ಥೆಗಳಲ್ಲಿ ಕೊರೋನಾ ಉಲ್ಬಣವಾದ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ ಹಾಗೂ ಶೈಕ್ಷಣಿಕ ಕಾರ್ಯಕ್ರಮವನ್ನು ಮುಂದೂಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಅಷ್ಟೇ ಅಲ್ಲದೆ ಕಾರ್ಯಕ್ರಮ ನಡೆಸುವ ಅನಿವಾರ್ಯವಿದ್ದಲ್ಲಿ ಸೀಮಿತ ಜನರಿಗೆ ಅವಕಾಶ ನೀಡಬೇಕು. ಆನ್ಲೈನ್ ಕಾರ್ಯಾಗಾರ ನಡೆಸಿ ಕಾರ್ಯಕ್ರಮದ ಪ್ರಯೋಜನ ಎಲ್ಲರಿಗೂ ದಕ್ಕುವಂತೆ ಅವಕಾಶ ನೀಡಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
Post a Comment