ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನ.23: ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ, ಉಡುಪಿ ಜಿಲ್ಲೆಯಲ್ಲಿ ವಿಶೇಷ ಅಭಿಯಾನ

ನ.23: ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ, ಉಡುಪಿ ಜಿಲ್ಲೆಯಲ್ಲಿ ವಿಶೇಷ ಅಭಿಯಾನ


 

ಉಡುಪಿ: ಉಡುಪಿ ಜಿಲ್ಲೆಯಲ್ಲಿ 2021ರ ನವೆಂಬರ್ 23, ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತದೆ. 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು. ಈ ಮಾತ್ರೆಯನ್ನು ಮಧ್ಯಾಹ್ನ ಊಟದ ನಂತರ ಶಾಲೆಗಳಲ್ಲಿ ಶಾಲಾ ಶಿಕ್ಷಕರ ಮತ್ತು ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯರ್ತೆಯರ ಉಪಸ್ಥಿತಿಯಲ್ಲಿ ನೀಡಲಾಗುವುದು. ಶಿಕ್ಷಕರು, ಬಿಸಿಯೂಟ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯವರಿಗೆ ಕೂಡಾ ಮಾತ್ರೆಯನ್ನು ನೀಡಲಾಗುತ್ತದೆ.


ಹೊಟ್ಟೆ ಹುಳಗಳ ತೊಂದರೆಯಿಂದ ರಕ್ತಹೀನತೆ, ಪೌಷ್ಠಿಕಾಹಾರದ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಮಾನಸಿಕ ತೊಂದರೆ ಕಾಣಿಸಿಕೊಳ್ಳಬಹುದು. ಅಲ್ಬೆಂಡಾಜೋಲ್ (Albendazole) ಮಾತ್ರೆ ನೀಡುವುದರಿಂದ ಹೊಟ್ಟೆ ಹುಳಗಳ ನಾಶವಾಗುತ್ತವೆ. ಈ ಕಾರ್ಯಕ್ರಮದಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ವಸತಿಯುತ ಶಾಲೆಗಳು (Residential School), ಐಟಿಐ, ನರ್ಸಿಂಗ್ ಕಾಲೇಜು, ಕೇಂದ್ರೀಯ ನವೋದಯ ಶಾಲೆ ಮತ್ತು ಪದವಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯಾಯ ಶಾಲೆ/ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತಿದೆ. ಅಂಗನವಾಡಿ ಮಕ್ಕಳಿಗೆ ಮತ್ತು ಶಾಲೆಯಿಂದ ಹೊರಗುಳಿದ 19 ರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಅಲ್ಬೆಂಡಾಜೋಲ್ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ.


1 ರಿಂದ 2 ರ್ಷದೊಳಗಿನ ಮಕ್ಕಳಿಗೆ 1/2 ಮಾತ್ರೆ ಹಾಗೂ 2-19 ರ್ಷದ ವಯಸ್ಸಿನವರಿಗೆ ಇಡೀ ಮಾತ್ರೆ ನೀಡಲಾಗುತ್ತಿದೆ. ಚಿಕ್ಕ ಮಕ್ಕಳಿಗೆ ಮಾತ್ರೆಯನ್ನು ಹುಡಿ ಮಾಡಿ ನೀರಿನೊಂದಿಗೆ ಸೇವಿಸಲು ಅಥವಾ ಚೀಪಿ ಸೇವಿಸುವಂತೆ ಕ್ರಮವಹಿಸಲು ತರಬೇತಿ ನೀಡಲಾಗಿದೆ. ದಿನಾಂಕ:23.11.2021 ರಂದು ಬಿಟ್ಟು ಹೋದ ಮಕ್ಕಳಿಗೆ ದಿನಾಂಕ: 27.11.2021ರ Mop up ದಿನದಂದು ಮಾತ್ರೆಗಳನ್ನು ನೀಡಲಾಗುವುದು. ಸೌಖ್ಯವಿಲ್ಲದ ಮಕ್ಕಳಿಗೆ ಗುಣಮುಖರಾದ ನಂತರ ಅಂದರೆ ನವೆಂಬರ್ 27ನೇ ತಾರೀಖಿನೊಳಗೆ ಅಲ್ಬೆಂಡಾಜೋಲ್ ಮಾತ್ರೆ  ನೀಡಲಾಗುತ್ತದೆ. ಬೇರೆ ಯಾವುದೇ ಔಷಧಿ ಸೇವಿಸುತ್ತಿದ್ದರೆ ವೈದ್ಯರ ಸಲಹೆ ಪಡೆದು ಅಲ್ಬೆಂಡಾಜೋಲ್  ಮಾತ್ರೆಯನ್ನು ಸೇವಿಸಬೇಕು. ಆಶಾ ಕಾರ್ಯಕರ್ತೆಯರ ಮೂಲಕ ಶಾಲೆಯಿಂದ ಹೊರಗಿರುವ 1 ರಿಂದ 19 ರ್ಷದ ಒಳಗಿರುವ ಮಕ್ಕಳನ್ನು ಪಟ್ಟಿ ಮಾಡಿ ಪಟ್ಟಿಯಲ್ಲಿರುವ ಎಲ್ಲಾ ಮಕ್ಕಳನ್ನು ಅಂಗನವಾಡಿಗೆ ಬರುವಂತೆ ಮಾಡಿ ಮಾತ್ರೆ ನೀಡಲಾಗುತ್ತದೆ.


ಕೋವಿಡ್-19 ಮರ್ಗಸೂಚಿಯನ್ನು ಅನುಸರಿಸಿ ಕಾರ್ಯಕ್ರಮ ಜರುಗಿಸುವಾಗ ಸಾರ್ವತ್ರಿಕ ಮುನ್ನೆಚ್ಚರಿಕೆ  (Universal Precaution) ತೆಗೆದುಕೊಳ್ಳುವುದು ಮತ್ತು 6 ಅಡಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಮತ್ತು ಸ್ಯಾನಿಟೈಜರನ್ನು ಬಳಸುವುದು ಕಡ್ಡಾಯ. ಮಕ್ಕಳಿಗೆ ಮಾತ್ರೆ ನೀಡಲು ಅನುಕೂಲವಾಗುವಂತೆ ಶುದ್ಧವಾದ ಕುಡಿಯುವ ನೀರು ಮತ್ತು ಚಮಚವನ್ನು ಇಟ್ಟುಕೊಂಡು ಮಾತ್ರೆ ವಿತರಣೆಗೆ ಸಹಕರಿಸಬೇಕು. ಸೌಖ್ಯವಿಲ್ಲದ ಮಕ್ಕಳಿಗೆ ಗುಣಮುಖರಾದ ನಂತರ ಅಲ್ಬೆಂಡಾಜೋಲ್ ಮಾತ್ರೆ ನೀಡುವುದು. ಮಕ್ಕಳು ಬೇರೆ ಯಾವುದೇ ಔಷಧಿ ಸೇವಿಸುತ್ತಿದ್ದರೆ ವೈದ್ಯರ ಸಲಹೆ ಪಡೆದ ನಂತರ ಅಲ್ಬೆಂಡಾಜೋಲ್ ಮಾತ್ರೆಯನ್ನು ಸೇವಿಸಬೇಕು.  


ಜಂತುಹುಳ ಭಾದೆಯಿಂದಾಗಿ ಮಕ್ಕಳು ಹೆಚ್ಚಾಗಿ ರೋಗಗ್ರಸ್ತರಾಗಿ ಶಾಲೆಗಳಿಗೆ ಗೈರು ಹಾಜರಾತಿಯಾಗುವುದು ಅಥವಾ ತರಗತಿಯಲ್ಲಿ ಪಾಠದ ಬಗ್ಗೆ ಏಕಾಗ್ರತೆ ನೀಡಲು ವಿಫಲರಾಗುತ್ತಾರೆ. ಮಕ್ಕಳ ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ಕುಂಠಿತವಾಗಿ ಭವಿಷ್ಯದಲ್ಲಿ ಅವರ ಕೆಲಸ ಮಾಡುವ ಸಾಮರ್ಥ್ಯ ಕಡಿಮೆಯಾಗಬಹುದು.


ಜಂತುಹುಳ ಭಾದೆ ಹರಡುವ ರೀತಿ: ನರ್ಮಲ್ಯತೆಯ ಕೊರತೆ ಹಾಗೂ ವೈಯುಕ್ತಿಕ ಶುಚಿತ್ವದ ಕೊರತೆಯಿಂದ, ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಷಿಸುವುದರಿಂದ ಜಂತುಹುಳ ಬಾಧೆ ಬರುತ್ತದೆ.


ಜಂತುಹುಳ ಬಾಧೆಯ ಲಕ್ಷಣಗಳು: ಯಾವ ಮಕ್ಕಳಲ್ಲಿ ಜಂತುಹುಳ ಸಂಖ್ಯೆ ಹೆಚ್ಚಿದೆಯೋ, ಆ ಮಕ್ಕಳಲ್ಲಿ ಹೊಟ್ಟೆನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತು ಇಂತಹ ಲಕ್ಷಣಗಳು ಕಂಡುಬರುತ್ತವೆ. ಜಂತುಹುಳ ಸಂಖ್ಯೆ ಕಡಿಮೆ ಇದ್ದವರಲ್ಲಿ ಯಾವುದೇ ತೊಂದರೆಗಳು ಕಾಣಿಸದಿರಲೂಬಹುದು.


ಜಂತುಹುಳ ಬಾಧೆಯಿಂದ ರಕ್ಷಿಸಿಕೊಳ್ಳಲು ಪೂರಕವಾದ ಇತರೆ ಮಾರ್ಗಗಳು: ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಿ ಶುಚಿಯಾಗಿಡುವುದು. ಊಟ/ತಿಂಡಿ ಮಾಡುವ ಮೊದಲು ಹಾಗೂ ಶೌಚಾಲಯವನ್ನು ಬಳಸಿದ ನಂತರ ಕೈಗಳನ್ನು ಸಾಬೂನಿನಿಂದ ತೊಳೆಯುವುದು.ಆಹಾರ ಪದರ್ಥಗಳನ್ನು ಮುಚ್ಚಿಡುವುದು. ಶುದ್ಧೀಕರಿಸಿದ ನೀರನ್ನೇ ಕುಡಿಯುವುದು. ಹಣ್ಣು, ಹಂಪಲು, ತರಕಾರಿಗಳನ್ನು ಉಪಯೋಗಿಸುವ ಮುನ್ನ ಶುಧ್ಧ ನೀರಿನಿಂದ ತೊಳೆಯುವುದು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು. ಮಲವಿರ್ಜನೆಗೆ ಶೌಚಾಲಯವನ್ನೇ ಬಳಸುವುದು. ನಡೆಯುವಾಗ ಪಾದರಕ್ಷೆಗಳನ್ನು ಬಳಸುವುದು.


ಉಡುಪಿ ಜಿಲ್ಲೆಯ 1 ರಿಂದ 19 ರ್ಷದೊಳಗೆ ಉಡುಪಿ ತಾಲೂಕಿನಲ್ಲಿ ಅಂದಾಜು 1,55,443, ಕುಂದಾಪುರದಲ್ಲಿ 1,03,797, ಕಾರ್ಕಳದಲ್ಲಿ 57,380 ಸೇರಿದಂತೆ ಒಟ್ಟು 3,16,620 ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆಗಳನ್ನು ವಿತರಣೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post