ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಗಂಜೀಫಾ ಆಟದ ಎಲೆಗಳ ಪ್ರಾತ್ಯಕ್ಷಿಕೆ

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಗಂಜೀಫಾ ಆಟದ ಎಲೆಗಳ ಪ್ರಾತ್ಯಕ್ಷಿಕೆ

ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು


ಬೆಳ್ತಂಗಡಿ: ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿ ಸಾಂಪ್ರದಾಯಿಕ ಕಲಾತ್ಮಕ ಗಂಜೀಫಾ ಆಟದ ಎಲೆಗಳನ್ನು ರಚಿಸಿ ತಮ್ಮ ಸೃಜನಶೀಲತೆ ವ್ಯಕ್ತಪಡಿಸಿದರು.


ವಿದ್ಯಾರ್ಥಿಗಳು ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು. ವಸ್ತು ಸಂಗ್ರಹಾಲಯದ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಕಲಾತ್ಮಕ ಗಂಜೀಫಾ ಆಟದ ಎಲೆಗಳ ತಯಾರಿ ಹಾಗೂ ಬಣ್ಣಗಾರಿಕೆ ಕುರಿತು ಮಾಹಿತಿ ನೀಡಿದರು.


ಗಂಜೀಪಾ ಕಾರ್ಡ್‍ಗಳನ್ನು ತಯಾರಿಸಲು ಬೇಕಾದ ವಸ್ತುಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಯಿತು. ಸೃಜನಶೀಲತೆಯೊಂದಿಗೆ ವಿದ್ಯಾರ್ಥಿಗಳು ವಿವಿಧ ವಿನ್ಯಾಸದ ಕಲಾತ್ಮಕ ಗಂಜೀಫಾ ಕಾರ್ಡ್‍ಗಳನ್ನು ಬಣ್ಣದೊಂದಿಗೆ ರಚಿಸಿದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم