ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿ ವಿತರಣೆ

ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿ ವಿತರಣೆ

 


ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.


ರಾಜ್ಯದ ಪ್ರತಿಯೊಬ್ಬ ಶಿಕ್ಷಕರಿಗೆ ಗುರುತಿನ ಚೀಟಿಗಾಗಿ ತಲಾ ಒಬ್ಬೊಬ್ಬ ಶಿಕ್ಷಕರಿಗೆ 50 ರೂ.ಗಳಂತೆ ಒಟ್ಟು 99.09 ಲಕ್ಷ ರೂ.ಗಳನ್ನು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಬಿಡುಗಡೆ ಮಾಡಿದ್ದಾರೆ.


ಸಾರ್ವಜನಿಕರು ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ನೀಡಿದಾಗ ಸಂಬಂಧಪಟ್ಟ ನೌಕರರನ್ನು ಸುಲಭವಾಗಿ ಗುರುತಿಸಿ ಸೇವೆ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುರುತಿನ ಚೀಟಿಗಳನ್ನು ವಿತರಣೆ ಮಾಡಿದೆ.

ಇದೀಗ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿ ವಿತರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ.

0 تعليقات

إرسال تعليق

Post a Comment (0)

أحدث أقدم