ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ. ಗೋಪಾಲಕೃಷ್ಣ ಭಟ್ ಸಂಕಬಿತ್ಲು ಅವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಡಾ. ಗೋಪಾಲಕೃಷ್ಣ ಭಟ್ ಸಂಕಬಿತ್ಲು ಅವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ


ಮಂಗಳೂರು: ಸುಳ್ಯ ತಾಲೂಕು ಅಮರಮುಡ್ನೂರು ಗ್ರಾಮದ ದೊಡ್ಡತೋಟ ಸಮೀಪದ ಸಂಕಬಿತ್ಲು ಮನೆತನದಲ್ಲಿ ಜನಿಸಿದ  ಡಾ ಗೋಪಾಲಕೃಷ್ಣ ಭಟ್ ಸಂಕಬಿತ್ಲು 2021ರ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು, ನ.1ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ ಅವರು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.


ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜಡ್ಕ ಪ್ರೌಢಶಾಲೆ, ಸಂತ ಫಿಲೋಮಿನಾ ಕಾಲೇಜು, ಸಂತ ಅಲೋಶಿಯಸ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಡಾ ಜಿ ಕೆ ಭಟ್ ಸಂಕಬಿತ್ಲು ಮಂಗಳೂರು ಕೆ ಎಂ ಸಿ ವೈದ್ಯಕೀಯ ಮಹಾವಿದ್ಯಾಲಯದಿಂದ ಎಂ ಬಿ ಬಿ ಎಸ್ ಪದವಿಯನ್ನು ಗಳಿಸಿದರು.


ಕಳೆದ 42 ವರ್ಷಗಳಿಂದ ಮಂಗಳೂರಿನ ಪಡೀಲಿನಲ್ಲಿ ಹಾಗೂ ಮಂಗಳಾದೇವಿ ಸನಿಹ ಕುಟುಂಬ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಯುತರು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದು ಪ್ರಸ್ತುತ 2021-22 ಸಾಲಿನ ಕರ್ನಾಟಕ ರಾಜ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ, ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.


ವೈದ್ಯಕೀಯ ವಲಯದಲ್ಲಿ ಸಲ್ಲಿಸಿದ ಅಪರಿಮಿತ ಸೇವೆಗಾಗಿ ಭಾರತೀಯ ವೈದ್ಯಕೀಯ ಸಂಘವು ಶ್ರೀಯುತರಿಗೆ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದು ಕರ್ನಾಟಕ ರಾಜ್ಯದ 2021ರ ಡಾ ಬಿ.ಸಿ ರಾಯ್ ಪ್ರಶಸ್ತಿಯನ್ನು  ಜುಲೈ 2021ರಲ್ಲಿ ಪ್ರದಾನ ಮಾಡಿ ಗೌರವಿಸಿತು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post