ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಿವಿಲ್ ಆಸ್ಪತ್ರೆ ಯಲ್ಲಿ ಅಗ್ನಿ ಅವಘಡ

ಸಿವಿಲ್ ಆಸ್ಪತ್ರೆ ಯಲ್ಲಿ ಅಗ್ನಿ ಅವಘಡ



 ನವದೆಹಲಿ: ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.


ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ.

ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸುಟ್ಟು ಗಾಯಗೊಂಡವರಿಗೆ ಚಿಕಿತ್ಸೆ ಆರಂಭವಾಗಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

0 تعليقات

إرسال تعليق

Post a Comment (0)

أحدث أقدم