ಬೆಂಗಳೂರು: ನವೆಂಬರ್ 26 ರಂದು ಮತ್ತೆ ವರುಣ ಆರ್ಭಟಿಸಲಿದ್ದಾನೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ನವೆಂಬರ್ 26ರಂದು ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಕರ್ನಾಟಕದಲ್ಲಿ ಚಳಿ, ಸುಳಿಗಾಳಿಯ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಮುಂದಿನ ಮೂರು ದಿನ ಬೆಂಗಳೂರು, ರಾಮನಗರ, ಮೈಸೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
Post a Comment