ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದಿನಿಂದ ಅಭಿಮಾನಿಗಳಿಗೆ ಪುನೀತ್ ಸಮಾಧಿ ದರ್ಶನ ಕ್ಕೆ ಅವಕಾಶ

ಇಂದಿನಿಂದ ಅಭಿಮಾನಿಗಳಿಗೆ ಪುನೀತ್ ಸಮಾಧಿ ದರ್ಶನ ಕ್ಕೆ ಅವಕಾಶ

 


ಬೆಂಗಳೂರು ; ನಿನ್ನೆ ಡಾ.ರಾಜ್​ಕುಮಾರ್​ ಕುಟುಂಬಸ್ಥರೆಲ್ಲ ಅಪ್ಪು ಸಮಾಧಿ ಬಳಿ ಬಂದು ಹಾಲು-ತುಪ್ಪ ಕಾರ್ಯವನ್ನು ನೇರವೇರಿಸಿದ್ದರು.

ಇದಾದ ಬಳಿಕ ಅಪ್ಪು ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡುತ್ತೇವೆ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದರು. 

ಅದರಂತೆ ಇಂದಿನಿಂದ ಸಾರ್ವಜನಿಕರಿಗೆ ಅಪ್ಪು ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. 25 ಲಕ್ಷಕ್ಕೂ ಹೆಚ್ಚು ಜನರು ಅಪ್ಪು ಅಂತಿಮ ದರ್ಶನವನ್ನು ಪಡೆದುಕೊಂಡಿದ್ದರು. 

ಇನ್ನೂ ಅದೆಷ್ಟೋ ಮಂದಿ ಅಪ್ಪು ಅಂತಿಮ ದರ್ಶನಕ್ಕೆ ಕಾದು ಕುಳಿತಿದ್ದರು. ಆದರೆ ಅಂತ್ಯಕ್ರಿಯೆ ವೇಳೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. 

ಕಂಠೀರವ ಸ್ಟುಡಿಯೋ ಸುತ್ತಮುತ್ತ ಸೆಕ್ಷನ್​ 144 ಜಾರಿಗೊಳಿಸಲಾಗಿತ್ತು. ಮತ್ತೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

0 Comments

Post a Comment

Post a Comment (0)

Previous Post Next Post