ಉಪ್ಪಿನಂಗಡಿ; ನದಿ ಮಧ್ಯದ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಯುವಕ ನೀರುಪಾಲಾದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಬಳಿ ನಡೆದಿದೆ. ರಾಜಸ್ಥಾನ ಮೂಲದ ಸೀತಾರಾಮ್ ನೀರುಪಾಲಾದ ಯುವಕ. ಗುಂಡ್ಯ ಬಳಿ ಬಂದ ಗೂಡ್ಸ್ ಟೆಂಪೋ ದ ಡ್ರೈವರ್ ಹಾಗೂ ಕ್ಲೀನರ್ ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ವಾಹನ ನಿಲ್ಲಿಸಿ, ನದಿಯ ಬಂಡೆಯೊಂದರ ಮೇಲೆ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ.
ಈ ವೇಳೆ ಸೀತಾರಾಮ್ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.ನೀರು ಪಾಲಾದ ಯುವಕನಿಗಾಗಿ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಇಂದು ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸುವ ಸಾಧ್ಯತೆಯಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment