ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ

 


ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


0 Comments

Post a Comment

Post a Comment (0)

Previous Post Next Post