ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ನವಂಬರ್ 10ರಂದು ಅಪರಾಹ್ನ 2.30 ರಿಂದ ಮಂಗಳ ಸಭಾಂಗಣದಲ್ಲಿ 'ಕನ್ನಡ ಡಿಂಡಿಮ' ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.
ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ, ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಸೋಮಣ್ಣ ಉಪಸ್ಥಿತರಿರಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ರಂಗಕರ್ಮಿ ಜೀವನ್ ರಾಮ್ ಸುಳ್ಯ ಮತ್ತು ಬಳಗದವರಿಂದ ʼಕನ್ನಡ ಗೀತ ಸೌರಭʼ ನಡೆಯಲಿದೆ, ಅಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವಿಶ್ವವಿದ್ಯಾನಿಲಯದ ಪ್ರಕಟಣೆ ಕೋರಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment