ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದರು.
ಮೃತರನ್ನು ಮಂಜುನಾಥ್ (28)ವರ್ಷ ಮತ್ತು ಅಂತೋನಿ (35)ವರ್ಷ ಎಂದು ಗುರುತಿಸಲಾಗಿದೆ. ಇಬ್ಬರೂ ಭದ್ರಾವತಿ ತಾಲೂಕಿನ ಜಯಂತಿ ನಗರ ಗ್ರಾಮಸ್ಥರಾಗಿದ್ದಾರೆ.
ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
إرسال تعليق