ಕಾಸರಗೋಡು: ಟಿಪ್ಪರ್ ಲಾರಿ ಮತ್ತು ಕಾರು ನಡುವೆ ಡಿಕ್ಕಿಯಾದ ಘಟನೆಯೊಂದು ಕುಂಬಳೆ ಆರಿಕ್ಕಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ.
ಬಂದ್ಯೋಡಿನ ಮಹಮ್ಮದ್ ಶರೀಫ್ ( 32), ಸಾನಿಯಾ (25), ಆಯಿಷಾ (55), ಇಸಾನ್ (4), ಶೈಸೀನ್ (4), ಲಾಸಿನ್ (2) ಗಾಯಗೊಂಡವರು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಹಾಗೂ ಕಾರು ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೂ ಗಂಟೆಗೂ ಅಧಿಕ ಸಮಯ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
إرسال تعليق