ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದ ಸಮಯದಲ್ಲಿ ಸಂಸದ ಪ್ರತಾಪ್ ಸಿಂಹ ಕಾರು ಪಲ್ಟಿಯಾಗಿದೆ.
ಕಾರು ಪಲ್ಟಿಯಾಗಿದ್ದರಿಂದ ಚಾಲಕ ಗಾಯಗೊಂಡು, ಉಳಿದ ಮಂದಿ ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ.
ಸಂಸದ ಪ್ರತಾಪ್ ಸಿಂಹ ಅವರು, ಅವರ ಪತ್ನಿ, ಮಗಳು, ಕಾರು ಚಾಲಕ ಸೇರಿದಂತೆ ಆರು ಜನರೊಂದಿಗೆ ತಮ್ಮ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು.
ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯಲ್ಲಿ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದಂತ ಸಂಸದ ಪ್ರತಾಪ್ ಸಿಂಹ, ಪತ್ನಿ, ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನ ಚಾಲಕ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಸಂಸದ ಪ್ರತಾಪ್ ಸಿಂಹ ಸೇರಿದಂತೆ ಪತ್ನಿ, ಮಗಳು ಸೇರಿ ಇನ್ನೂ ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಚನ್ನಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق