ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು: ವಕೀಲರ ಸಂಘದಿಂದ ಹರೇಕಳ ಹಾಜಬ್ಬ ಅವರಿಗೆ ಗೌರವ ಸನ್ಮಾನ

ಮಂಗಳೂರು: ವಕೀಲರ ಸಂಘದಿಂದ ಹರೇಕಳ ಹಾಜಬ್ಬ ಅವರಿಗೆ ಗೌರವ ಸನ್ಮಾನ



ಮಂಗಳೂರು ವಕೀಲರ ಸಂಘದ ವಾರ್ಷಿಕೋತ್ಸವ ಇತ್ತೀಚೆಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ನಡೆಯಿತು.


ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮುರಳಿಧರ ಪೈ ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಹಾಜಬ್ಬ ಅವರ ಕನಸಿಗೆ ಸಹಕಾರಿಯಾಗುವಂತೆ ವಕೀಲರು ಸಂಗ್ರಹಿಸಿದ ಸುಮಾರು 2 ಲಕ್ಷ ರೂ.ಗಳನ್ನು ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ರಾಜ್ಯಮಟ್ಟದ ಪ್ರಶಸ್ತಿ ಪಡೆದ ತುಳುನಾಡ ವೈಭವ ಎಂಬುವಂತಹ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.


ಮಂಗಳೂರು ವಕೀಲರ ಸಂಘದ ವಾರ್ಷಿಕೋತ್ಸವದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ತಮ್ಮ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post