ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜು ಆವರಣದಲ್ಲಿರುವ ತಕ್ಷಶಿಲಾ ಹುಡುಗರ ವಸತಿ ನಿಲಯದಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಜನಿಸಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮ ಭಾನುವಾರ ವಸತಿನಿಲಯದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾಭಾರತಿ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ್ ಅವರು ಮಾತನಾಡಿ ಪ್ರತಿ ಜನ್ಮದಿನ ಕಳೆದಂತೆ ಪ್ರತಿಯೊಬ್ಬರ ವಯಸ್ಸು ಹೆಚ್ಚಾಗುವುದರ ಜೊತೆಗೆ ನಮ್ಮ ಮೇಲಿನ ಜವಾಬ್ದಾರಿಯೂ ಹೆಚ್ಚುತ್ತದೆ.
ಈ ನಿಟ್ಟಿನಲ್ಲಿ ಮನೆಗೆ ಒಳ್ಳೆಯ ಮಕ್ಕಳಾಗಿ, ಸಮಾಜಕ್ಕೆ ಉತ್ತಮ ನಾಗರಿಕರಾಗಿ ವ್ಯಕ್ತಿತ್ವ ನಿರ್ಮಿಸಿಕೊಳ್ಳುವ ಬಹುದೊಡ್ಡ ಜವಾಬ್ದಾರಿ ನನ್ನ ಮೇಲಿದೆ ಎಂದು ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿ ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಸತಿ ನಿಲಯದ ಇತರೆ ವಿದ್ಯಾರ್ಥಿಗಳು, ಸಹಾಯಕ ನಿಲಯ ಪಾಲಕರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق