ಬಂಟ್ವಾಳ : ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ಮಧ್ಯ ರಾತ್ರಿ ವೇಳೆ ಲಾರಿ ಹಾಗೂ ಬೈಕ್ ಅಪಘಾತ ಸಂಭವಿಸಿದ್ದು, ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ
ಮೃತರನ್ನು ಮಂಗಳೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು, ಇವರು ಮೆಲ್ಕಾರ್ ಜಂಕ್ಷನ್ ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಘಟನೆಯ ವೇಳೆ ಲಾರಿ ಚಾಲಕ ಅಪಘಾತದಲ್ಲಿ ತಪ್ಪಿಸಲು ಪ್ರಯತ್ನಿಸಿದ ವೇಳೆ ಮೆಲ್ಕಾರ್ ನಲ್ಲಿದ್ದ ಸರ್ಕಲ್ ಹುಡಿಯಾಗಿದೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق