ಪ್ರಾತಿನಿಧಿಕ ಚಿತ್ರ
ಮಂಗಳೂರು: ಕರ್ನಾಟಕ ರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ (ಹಿಂದುಳಿದ ವರ್ಗಗಳ ಪ್ರವರ್ಗ 1) ಜನಾಂಗಗಳ ಒಕ್ಕೂಟ (ರಿ.), ಬೆಂಗಳೂರು ಇದರ ದಕ್ಷಿಣ ಕನ್ನದ ಜಿಲ್ಲಾ ಸಮಿತಿಯು ನ.9ರಂದು ಉದ್ಘಾಟನೆಗೊಳ್ಳಲಿದೆ.
ಅಂದು ಸಂಜೆ 3:30 ಕ್ಕೆ ಕದ್ರಿ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ಕದ್ರಿ ಶ್ರೀ ಯೋಗೇಶ್ವರ ಮಠದ ಪೀಠಾಧಿಪತಿ ಶ್ರೀ ರಾಜಾ ಯೋಗಿ ನಿರ್ಮಲ್‌ನಾಥ್‌ಜೀ ಮಹಾರಾಜ್‌ರವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಸಾಮಾಜಿಕ ನ್ಯಾಯ ವ್ಯವಸ್ಥೆಯಲ್ಲಿ ಅತ್ಯಂತ ಹಿಂದುಳಿದ ಹಾಗೂ ಸರಕಾರದಿಂದ ಯಾವುದೇ ಸೌಲಭ್ಯವನ್ನು ಪಡೆಯದೇ ಮೂಲಭೂತ ಸೌಕರ್ಯದಿಂದ ವಂಚಿತರಾದ ಕಟ್ಟಕಡೆಯ ಸಮುದಾಯ ಇದ್ದರೆ ಅದು ನಮ್ಮ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗ. ಆದುದರಿಂದ ನಮ್ಮ ಈ ಸಮುದಾಯದ ಜನರಿಗೆ ಮೂಲಭೂತ ಸೌಲಭ್ಯ ಮತ್ತು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಹಕಾರಿಯಾಗಿ ನಿಲ್ಲಲು ಹಾಗೂ ಅವರಿಗೆ ಸೂಕ್ತ ನ್ಯಾಯ ದೊರಕಿಸಿ ಕೊಡಲು ಈಗಾಗಲೇ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಡಿಯಲ್ಲಿ ಬರುವ ಹಿಂದುಳಿದ ವರ್ಗ ಪ್ರವರ್ಗ 1ರ 46 ಜಾತಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಸ್ಥಾಪನೆಯಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಸಮಿತಿ ರಚನೆಯಾಗಲಿದ್ದು, ಅದರಂತೆ ದಕ್ಷಿಣ ಕನ್ನಡದಲ್ಲೂ ಸಮಿತಿ ರಚನೆಯಾಗಲಿದೆ.
ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸದಸ್ಯ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸುವರು. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಕರ್ನಾಟಕ ರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ವಿಠಲ್ ಬಿ ಗಣಾಚಾರಿ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಅಧ್ಯಕ್ಷ ಶ್ರೀ ಸುದರ್ಶನ್ ಮೂಡಬಿದ್ರೆ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಕದ್ರಿ, ಶಕಿಲಾ ಕಾವ, ಒಕ್ಕೂಟದ ಉಪಾಧ್ಯಕ್ಷ ಬಿ.ಕೆ ನಾರಾಯಣ ಸ್ವಾಮಿ, ತುಕಾರಾಮ್ ನಾಗಪ್ಪ ವಾಷ್ಟರ್, ಅನಂತ ಕೃಷ್ಣ ಯಾದವ್, ರಮೇಶ್ ಯಚ್ ಜೋಗಿ, ಒಕ್ಕೂಟದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಚೈತ್ರ ಬೆಂಗಳೂರು, ಸಚಿನ್ ದಳವಾಯಿ, ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಜೋಗಿ, ಗೊಲ್ಲ ಸಮಾಜದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಟಿ. ಆರ್ ಕುಮಾರ ಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ, ದ. ಕ. ಜಿಲ್ಲಾ ಗೊಲ್ಲ (ಯಾದವ) ಸಮಾಜ ಸೇವಾ ಸಂಘದ ಪ್ರಕಟನೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment