ಉಡುಪಿ: ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ಪ್ರಥಮವಾಗಿ ಅನುಷ್ಠಾನಗೊಳಿಸಿದ ಕೀರ್ತಿ ಕರ್ನಾಟಕ ರಾಜ್ಯಕ್ಕೆ ಸಂದಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ವಿದ್ಯಾರ್ಥಿಗಳು ನಿಜವಾದ ಫಲಾನುಭವಿಗಳು. ಇದರ ಮೂಲ ಗುರಿ ಅರ್ಥ ಮಾಡಿಕೊಂಡು ನಿಜವಾದ ರೀತಿಯಲ್ಲಿ ಬದುಕಿನಲ್ಲಿ ಅಳವಡಿಸಿಕೊಂಡಾಗ ಹೊಸ ಶಿಕ್ಷಣ ನೀತಿ ಸಾಥ೯ಕತೆಯನ್ನು ಪಡೆದುಕೊಳ್ಳುತ್ತದೆ. ನಮ್ಮ ಯಶಸ್ಸು ನೇೂಡಿ ಇನ್ನಿತರ ರಾಜ್ಯಗಳು ಅಳವಡಿಸಿಕೊಳ್ಳುವಂತ ಪ್ರೇರಣೆ ನಮ್ಮ ರಾಜ್ಯದಿಂದಲೇ ಪ್ರಾರಂಭವಾಗಲಿ ಎಂದು ಅಂಕಣಕಾರ ನಿವೃತ್ತ ಸಹ ಪ್ರಾಧ್ಯಾಪಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.
ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಇವರ ವತಿಯಿಂದ ಹಮ್ಮಿಕೊಂಡ 2021ರ ಪ್ರಥಮ ವರುಷದಲ್ಲಿ ಪ್ರವೇಶಾತಿ ಪಡೆದ ಪದವಿ ವಿದ್ಯಾರ್ಥಿಗಳಿಗಾಗಿ ನಡೆದ ಹೊಸ ಶಿಕ್ಷಣ ನೀತಿ ಪರಿಚಯ ಮತ್ತು ಪ್ರಶಿಕ್ಷಣ ಕಾರ್ಯಕ್ರಮ ಉದ್ಘಾಟನೆ ಮಾಡಿ ವಿಶೇಷ ಉಪನ್ಯಾಸವಿತ್ತರು.
ಕಾಲೇಜು ಪ್ರಾಂಶುಪಾಲ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಕಾಲೇಜಿನ ಬೆಳವಣಿಗೆ ಕುರಿತಾಗಿ ಮಾಹಿತಿ ನೀಡಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗೇೂಪಾಲಕೃಷ್ಣ ಗಾಂವ್ಕರ್ ಹೊಸ ಶಿಕ್ಷಣ ನೀತಿ ಮಾಹಿತಿ ನೀಡಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಉಮೇಶ್ ಪೈ ವಂದಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ ಕಾರ್ಯಕ್ರಮ ನಿರೂಪಿಸಿದರು. ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment